T20 World Cup: ಕೆಕೆಆರ್ ಆಟಗಾರ ಫಿನ್ ಅಲೆನ್ ಅಬ್ಬರ; ದಕ್ಷಿಣ ಆಫ್ರಿಕಾವನ್ನು ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲೆಂಡ್!

T20 World Cup: ಕೆಕೆಆರ್ ಆಟಗಾರ ಫಿನ್ ಅಲೆನ್ ಅಬ್ಬರ; ದಕ್ಷಿಣ ಆಫ್ರಿಕಾವನ್ನು ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲೆಂಡ್!

ಕೋಲ್ಕತ್ತಾ: ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದೆ. ಈ ಐತಿಹಾಸಿಕ ಗೆಲುವಿಗೆ ಕಾರಣವಾಗಿದ್ದು ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಫಿನ್ ಅಲೆನ್ ಅವರ ಸ್ಫೋಟಕ ಶತಕ.
ದಾಖಲೆಯ ಶತಕ ಬಾರಿಸಿದ ಅಲೆನ್
​ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ್ದ 170 ರನ್‌ಗಳ ಗುರಿಯನ್ನು ನ್ಯೂಜಿಲೆಂಡ್ ಕೇವಲ 12.5 ಓವರ್‌ಗಳಲ್ಲಿ ಬೆನ್ನಟ್ಟಿತು. ಫಿನ್ ಅಲೆನ್ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ವೇಗದ ಶತಕದ ದಾಖಲೆ ಬರೆದರು. ಅವರ ಈ ಅಮೋಘ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳು ಸೇರಿದ್ದವು.


ಕೆಕೆಆರ್ ಅಭಿಮಾನಿಗಳಲ್ಲಿ ಸಂಭ್ರಮ
​ಮತ್ತೆ ಮೂರು ವಾರಗಳಲ್ಲಿ ಐಪಿಎಲ್ ಆರಂಭವಾಗಲಿದ್ದು, ಅಲೆನ್ ಕೆಕೆಆರ್ ಪರ ಕಣಕ್ಕಿಳಿಯಲಿದ್ದಾರೆ. ತಮ್ಮ ‘ಹೋಮ್ ಗ್ರೌಂಡ್’ ಎನಿಸಿಕೊಂಡಿರುವ ಕೋಲ್ಕತ್ತಾದಲ್ಲೇ ಅಲೆನ್ ತೋರಿದ ಈ ಅಬ್ಬರದ ಆಟವು ಕೆಕೆಆರ್ ಅಭಿಮಾನಿಗಳಲ್ಲಿ ಹೊಸ ಆಸೆ ಚಿಗುರಿಸಿದೆ. ಕಿವೀಸ್ ಪಡೆ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್‌ಗಳ ಅಂತರದಿಂದ ಮಣಿಸಿ ಫೈನಲ್‌ಗೆ ಅರ್ಹತೆ ಪಡೆದಿದೆ.

ಅಂತರಾಷ್ಟ್ರೀಯ ಕ್ರೀಡೆ