ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ.


ಘಟನೆಯ ವಿವರ:
ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಕಟ್ಟಡವು ಸಂಪೂರ್ಣವಾಗಿ ನೆಲಸಮವಾಗಿದ್ದು, ಅವಶೇಷಗಳ ಅಡಿಯಲ್ಲಿ ನೂರಾರು ಜನರು ಸಿಲುಕಿದ್ದಾರೆ.

ಘಟನಾ ಸ್ಥಳದಲ್ಲಿ ರಕ್ಷಣಾ ತಂಡಗಳು ಕಾರ್ಯಾಚರಣೆ ಮುಂದುವರಿಸಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಫ್ಘಾನ್ ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಮೃತಪಟ್ಟವರಲ್ಲಿ ಹೆಚ್ಚಿನವರು ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು ಮತ್ತು ಅಲ್ಲಿನ ಸಿಬ್ಬಂದಿಗಳಾಗಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.


ಅಫ್ಘಾನ್ ಸರ್ಕಾರದ ಆಕ್ರೋಶ:
ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆಸಿರುವ ಈ ದಾಳಿಯನ್ನು ಅಫ್ಘಾನಿಸ್ತಾನ ಸರ್ಕಾರ ತೀವ್ರವಾಗಿ ಖಂಡಿಸಿದೆ. “ಇದು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಮಾಯಕರ ಮೇಲೆ ನಡೆಸಿದ ಕ್ರೂರ ಹತ್ಯಾಕಾಂಡ” ಎಂದು ಅಫ್ಘಾನ್ ವಕ್ತಾರರು ಕಿಡಿಕಾರಿದ್ದಾರೆ. ಈ ದಾಳಿಗೆ ಪಾಕಿಸ್ತಾನವು ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅಂತರಾಷ್ಟ್ರೀಯ