ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮುಖ್ಯ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮುಖ್ಯ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರಿನ ಕದ್ರಿ ಮಂಜುನಾಥ ದೇಗುಲ ಗುರಿಯಾಗಿಸಿಕೊಂಡಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಮುಖ್ಯ ಆರೋಪಿ ಮೊಹಮ್ಮದ್ ಶಾರಿಕ್‌ನಿಗೆ ಬೆಂಗಳೂರಿನ ವಿಶೇಷ NIA ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 94,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಘಟನೆಯ ಹಿನ್ನೆಲೆ: ನವೆಂಬರ್ 19, 2022 ರಂದು ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಪ್ರೆಶರ್ ಕುಕ್ಕರ್ ಐಇಡಿ (IED) ಆಕಸ್ಮಿಕವಾಗಿ ಸ್ಫೋಟಗೊಂಡಿತ್ತು. ತನಿಖೆಯ ವೇಳೆ, ಆರೋಪಿ ಮೊಹಮ್ಮದ್ ಶಾರಿಕ್ ಹಿಂದೂ ಸಮುದಾಯದಲ್ಲಿ ಭೀತಿ ಮೂಡಿಸುವ ಉದ್ದೇಶದಿಂದ ಪ್ರಸಿದ್ಧ ಕದ್ರಿ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಬಾಂಬ್ ಇಡಲು ಸಂಚು ರೂಪಿಸಿದ್ದ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿತ್ತು.

ತಪ್ಪೊಪ್ಪಿಕೊಂಡ ಶಾರಿಕ್: ಆರಂಭದಲ್ಲಿ ತಾನು ನಿರಪರಾಧಿ ಎಂದು ವಾದಿಸಿದ್ದ ಶಾರಿಕ್, ತದನಂತರ ತನಿಖೆಯ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಡಿಸೆಂಬರ್ 2025 ರಲ್ಲಿ CrPC ಸೆಕ್ಷನ್ 229 ರ ಅಡಿಯಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದನು. ಆರೋಪಿಯ ತಪ್ಪೊಪ್ಪಿಗೆಯನ್ನು ಪುರಸ್ಕರಿಸಿದ ವಿಶೇಷ ನ್ಯಾಯಾಲಯವು ಸೋಮವಾರ ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ.

ಅಪರಾಧ ರಾಜ್ಯ