ಸಚಿವ ಡಿ. ಸುಧಾಕರ್ ನಿಧನ: ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರು

ಸಚಿವ ಡಿ. ಸುಧಾಕರ್ ನಿಧನ: ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರು

ಬೆಂಗಳೂರು: ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (66) ಅವರು ಸುದೀರ್ಘ ಕಾಯಿಲೆಯಿಂದ ಇಂದು (ಭಾನುವಾರ) ಮುಂಜಾನೆ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿನಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಆಸ್ಪತ್ರೆಯ ಅಧಿಕೃತ ಹೇಳಿಕೆ​ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (KIMS) ಆಸ್ಪತ್ರೆಯಲ್ಲಿ ಸಚಿವರು ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಆರ್. ಚಿನ್ನದೊರೈ ಅವರು ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ, “ಸನ್ಮಾನ್ಯ ಸಚಿವ ಡಿ. ಸುಧಾಕರ್ ಅವರು ದಿನಾಂಕ 10.05.2026ರ ಮುಂಜಾನೆ 3.15 ಕ್ಕೆ ನಿಧನರಾಗಿದ್ದಾರೆ” ಎಂದು ಅಧಿಕೃತವಾಗಿ ಘೋಷಿಸಲಾಗಿದೆ.

ಶ್ವಾಸಕೋಶದ ಸೋಂಕಿನಿಂದ ಬಳಲಿಕೆ​ ಕಳೆದ 60 ದಿನಗಳಿಂದ ಸುಧಾಕರ್ ಅವರು ತೀವ್ರ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಐಸಿಯುನಲ್ಲಿ ಇರಿಸಿ ತಜ್ಞ ವೈದ್ಯರ ತಂಡ ನಿರಂತರವಾಗಿ ಚಿಕಿತ್ಸೆ ನೀಡುತ್ತಿತ್ತು. ಆದರೆ, ಇಂದು ಮುಂಜಾನೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.

ಗಣ್ಯರ ಸಂತಾಪ​ ಸಚಿವ ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿಗಳು, ಸಚಿವ ಸಂಪುಟದ ಸಹೋದ್ಯೋಗಿಗಳು ಮತ್ತು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಸರಳ ವ್ಯಕ್ತಿತ್ವದ ಮತ್ತು ಕಾರ್ಯದಕ್ಷತೆಯುಳ್ಳ ನಾಯಕನನ್ನು ರಾಜ್ಯ ಕಳೆದುಕೊಂಡಿದೆ ಎಂದು ಸಂತಾಪ ಸಂದೇಶದಲ್ಲಿ ತಿಳಿಸಲಾಗಿದೆ.

ರಾಜಕೀಯ ರಾಜ್ಯ