ಅಹಮದಾಬಾದ್: ಐಪಿಎಲ್ ಫೈನಲ್ ಪಂದ್ಯದಲ್ಲಿ ಸೋಲುಂಡ ಬೆನ್ನಲ್ಲೇ ಗುಜರಾತ್ ಟೈಟನ್ಸ್ (GT) ತಂಡದ ಆಟಗಾರರು ಮತ್ತು ಸಿಬ್ಬಂದಿಗೆ ಭದ್ರತಾ ಭೀತಿಯೊಂದು ಎದುರಾಗಿದೆ. ಭಾನುವಾರ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಫೈನಲ್ ಪಂದ್ಯ ಮುಗಿಸಿ ಹೋಟೆಲ್‌ಗೆ ಮರಳುತ್ತಿದ್ದ ವೇಳೆ ಗುಜರಾತ್ ತಂಡದ ಬಸ್ ಮಧ್ಯರಸ್ತೆಯಲ್ಲೇ ಕೆಟ್ಟು ನಿಂತಿದೆ.

ವಾಹನದಲ್ಲಿ ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಆಟಗಾರರು ಹಾಗೂ ತರಬೇತಿ ಸಿಬ್ಬಂದಿಯನ್ನು ಬಸ್‌ನಿಂದ ಕೆಳಗಿಳಿಸಿ, ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
ಬಸ್ ತುಂಬ ಆವರಿಸಿದ ಹೊಗೆ ಪಿಟಿಐ ಸುದ್ದಿ ಸಂಸ್ಥೆಯ ವರದಿಯ ಪ್ರಕಾರ, ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ತಕ್ಷಣ ಇಡೀ ಬಸ್‌ನೊಳಗೆ ದಟ್ಟವಾದ ಹೊಗೆ ಆವರಿಸಿಕೊಂಡಿತ್ತು. ಇದರಿಂದಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಆಟಗಾರರು ಮತ್ತು ಪೋಷಕ ಸಿಬ್ಬಂದಿ ಸೇರಿದಂತೆ ಎಲ್ಲರೂ ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ರಸ್ತೆಯಲ್ಲೇ ಕಾಯಬೇಕಾಗಿ ಬಂದ ಆಟಗಾರರುಅಹಮದಾಬಾದ್ನ ರಸ್ತೆಯಲ್ಲೇ ಬಸ್ ಸ್ಥಗಿತಗೊಂಡಿದ್ದರಿಂದ, ಪರ್ಯಾಯ ವ್ಯವಸ್ಥೆ ಮಾಡುವವರೆಗೆ ಗುಜರಾತ್ ಟೈಟನ್ಸ್ ಆಟಗಾರರು ಕೆಲಕಾಲ ರಸ್ತೆಯಲ್ಲೇ ಕಾಯಬೇಕಾಯಿತು. ತದನಂತರ ಫ್ರಾಂಚೈಸಿಯು ಮತ್ತೊಂದು ಬಸ್ ವ್ಯವಸ್ಥೆ ಮಾಡಿ, ಆಟಗಾರರನ್ನು ಸುರಕ್ಷಿತವಾಗಿ ಹೋಟೆಲ್‌ಗೆ ತಲುಪಿಸಿದೆ.
ಗುಜರಾತ್ ಟೈಟನ್ಸ್ ತಂಡಕ್ಕೆ ಭಾನುವಾರ ರಾತ್ರಿ ತೀವ್ರ ನಿರಾಶಾದಾಯಕವಾಗಿತ್ತು. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಜಿದ್ದಾಜಿದ್ದಿನ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಜಿಟಿ ತಂಡ 5 ವಿಕೆಟ್‌ಗಳ ಸೋಲನ್ನು ಅನುಭವಿಸಿ ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಈ ಬೇಸರದ ಬೆನ್ನಲ್ಲೇ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ಅಪಘಾತದಿಂದ ಕೂದಲೆಳೆಗಳ ಅಂತರದಲ್ಲಿ ಪಾರಾಗಿರುವುದು ತಂಡಕ್ಕೆ ಮತ್ತೊಂದು ಶಾಕ್ ನೀಡಿದಂತಾಗಿದೆ.

