ದಕ್ಷಿಣ ಭಾರತದ ಗಾನಕೋಗಿಲೆ,  ಎಸ್. ಜಾನಕಿ ಇನ್ನಿಲ್ಲ: ಮೈಸೂರಿನಲ್ಲಿ ಕೊನೆಯುಸಿರು

ದಕ್ಷಿಣ ಭಾರತದ ಗಾನಕೋಗಿಲೆ, ಎಸ್. ಜಾನಕಿ ಇನ್ನಿಲ್ಲ: ಮೈಸೂರಿನಲ್ಲಿ ಕೊನೆಯುಸಿರು

ಮೈಸೂರು: ದಕ್ಷಿಣ ಭಾರತದ ಚಿತ್ರರಂಗದ ‘ಗಾನಕೋಗಿಲೆ’ (Nightingale of South India) ಎಂದೇ ಪ್ರಸಿದ್ಧರಾಗಿದ್ದ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ (88) ಅವರು ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರ ನಿಧನದಿಂದಾಗಿ ಇಡೀ ಭಾರತೀಯ ಚಿತ್ರರಂಗ ಹಾಗೂ ಕೋಟ್ಯಂತರ ಸಂಗೀತ ಪ್ರೇಮಿಗಳು ತೀವ್ರ ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ಮನೋರಂಜನೆ ರಾಜ್ಯ