ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಿನಾಂಕ 03.08.2026 (ಸೋಮವಾರ) ರಂದು ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿಯಿಂದ ಈ ಪ್ರಕಟಣೆ ಹೊರಬಿದ್ದಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಯಾವ ತಾಲೂಕುಗಳಲ್ಲಿ ಯಾರಿಗೆ ರಜೆ?
- ಮಂಗಳೂರು ಉಪವಿಭಾಗ: ಮಂಗಳೂರು, ಬಂಟವಾಳ, ಮೂಡಬಿದ್ರೆ, ಮುಲ್ಕಿ, ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ (10 ನೇ ತರಗತಿವರೆಗೆ) ರಜೆ ಇರಲಿದೆ (ಎಲ್ಲಾ ವಸತಿ ಶಾಲೆಗಳನ್ನೂ ಸೇರಿ).
- ಪುತ್ತೂರು ಉಪವಿಭಾಗ: ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (PUC), ITI ಮತ್ತು ಡಿಪ್ಲೊಮಾ ಕಾಲೇಜುಗಳಿಗೆ (12 ನೇ ತರಗತಿವರೆಗೆ) ರಜೆ ಪ್ರಕಟಿಸಲಾಗಿದೆ.
ಸಾರ್ವಜನಿಕರಿಗೆ ಮತ್ತು ಪೋಷಕರಿಗೆ ಪ್ರಮುಖ ಸೂಚನೆಗಳು:
- ಮಕ್ಕಳ ಸುರಕ್ಷತೆ: ನೀರಿರುವ ತಗ್ಗು ಪ್ರದೇಶ, ಕೆರೆ, ನದೀತೀರ ಹಾಗೂ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಜಾಗ್ರತೆ ವಹಿಸಬೇಕು.
- ಮೀನುಗಾರರಿಗೆ ಎಚ್ಚರಿಕೆ: ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.
- ಪ್ರವಾಸಿಗರಿಗೆ ನಿರ್ಬಂಧ: ಪ್ರವಾಸಿಗರು ಮತ್ತು ಸಾರ್ವಜನಿಕರು ನದೀತೀರ ಹಾಗೂ ಸಮುದ್ರತೀರಕ್ಕೆ ತೆರಳದಂತೆ ತಿಳಿಸಲಾಗಿದೆ.
- ಅಧಿಕಾರಿಗಳಿಗೆ ಖಡಕ್ ಸೂಚನೆ: ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕರ್ತವ್ಯವನ್ನು ನಿರ್ವಹಿಸಬೇಕು. ಪ್ರತಿಯೊಂದು ತಾಲೂಕಿನಲ್ಲೂ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಲು ಸೂಚಿಸಲಾಗಿದೆ.
- Toll Free No: 1077
- ದೂರವಾಣಿ ಸಂಖ್ಯೆ: 0824-2442590

