​ಭಾರೀ ಮಳೆ ಹಿನ್ನಲೆ: ನಾಳೆ (ಆಗಸ್ಟ್ 8) ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ!

​ಭಾರೀ ಮಳೆ ಹಿನ್ನಲೆ: ನಾಳೆ (ಆಗಸ್ಟ್ 8) ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ!

​ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 8 ರಂದು ಜಿಲ್ಲೆಯ ಪ್ರಮುಖ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.​

ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಪುತ್ತೂರು, ಬೆಳ್ತಂಗಡಿ, ಕಡಬ ಮತ್ತು ಸುಳ್ಯ ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ (ಪಿಯು) ಕಾಲೇಜುಗಳಿಗೆ ನಾಳೆ (ಆಗಸ್ಟ್ 8) ರಜೆ ನೀಡಲಾಗಿದೆ.

ಪ್ರಾದೇಶಿಕ ರಾಜ್ಯ ಶೈಕ್ಷಣಿಕ ಹವಾಮಾನ ವರದಿ