ಮಂಗಳೂರು-ಮಡಿಕೇರಿ (NH-275) ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿಯ ಅಪಾಯಕಾರಿ ತಿರುವಿನಲ್ಲಿ ಟೆಂಪೋ ಟ್ರಾವೆಲರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಟೆಂಪೋ ಟ್ರಾವೆಲರ್ ಮೇಲೆಯೇ ಮಗುಚಿಬಿದ್ದಿದ್ದು, ವಾಹನದಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಮೂರು ಅಂಬುಲೆನ್ಸ್ ಗಳಲ್ಲಿ ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಚಿಕಿತ್ಸೆಯಾಗಿ ರವಾನಿಸಲಾಗಿದೆ.



