ನವದೆಹಲಿ: 2026ರ ಸಾಲಿನ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ’ ಪುರಸ್ಕೃತರನ್ನು ಉದ್ಧೇಶಿಸಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಹತ್ವದ ಸಂವಾದ ನಡೆಸಿದರು. 2047ರ ವೇಳೆಗೆ ಭಾರತವನ್ನು ‘ವಿಕಸಿತ ಭಾರತ’ ದೇಶವಾಗಿ ನಿರ್ಮಿಸಲು ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಪ್ರತಿಪಾದಿಸಿದರು.


ಕಾರ್ಯಕ್ರಮದ ನಂತರ, ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಗೌರವಾರ್ಥ ವಿಶೇಷ ರಾತ್ರಿ ಭೋಜನವನ್ನು ಏರ್ಪಡಿಸಿದ್ದರು.

‘ವಿಕಸಿತ ಭಾರತ 2047’ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರಸಂವಾದದಲ್ಲಿ ಮಾತನಾಡಿದ ಸಚಿವರು, “ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ದೇಶಭಕ್ತಿ, ನಾವೀನ್ಯತೆ ಹಾಗೂ ಸೃಜನಶೀಲತೆಯನ್ನು ಬೆಳೆಸುವುದು ಶಿಕ್ಷಕರ ಪ್ರಾಥಮಿಕ ಕರ್ತವ್ಯವಾಗಿದೆ. 2047ರ ವೇಳೆಗೆ ಭಾರತವನ್ನು ಪ್ರಪಂಚದ ಮುಂಚೂಣಿ ರಾಷ್ಟ್ರವನ್ನಾಗಿ ಮಾಡುವ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಇಂದಿನ ತರಗತಿಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಮೌಲ್ಯಗಳನ್ನು ಧಾರೆ ಎರೆಯಬೇಕಿದೆ,” ಎಂದು ತಿಳಿಸಿದರು.

ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾದ ಅತ್ಯುತ್ತಮ ಶಿಕ್ಷಕರ ಸಾಧನೆಯನ್ನು ಶ್ಲಾಘಿಸಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಅವರು ತಂದಿರುವ ಧನಾತ್ಮಕ ಬದಲಾವಣೆಗಳನ್ನು ಕೊಂಡಾಡಿದರು.

