

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸೃತಿ ಇರಾನಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರಗಳಾದ ಪ್ರಸನ್ನ ದರ್ಬೆ, ಶ್ರೀವತ್ಸ ಪಿ ಜಿ ಎಸ್ ಎನ್ ಪ್ರಸಾದ್, ಮನೋಹರ ರೈ, ಶೋಭಾ ಗಿರಿಧರ್, ವನಜಾ ಭಟ್, ಲೋಕೇಶ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ಮತ್ತಿತರರು ಉಪಸ್ಥಿತರಿದ್ದರು.

