

ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಸ್ಲಿಂ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಹಾಗೂ ಅವರ ಕಾರು ಚಾಲಕ ಮುಷರಫ್ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ನಡೆದಿದೆ. ಕಾರು ಹಾಗೂ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಭೀಕರ ಅಪಘಾತದ ತೀವ್ರತೆಗೆ ಕಾರು



ನಜ್ಜುಗುಜ್ಜಾಗಿದೆ.ಸೂರಲ್ಪಾಡಿ ನೌಷಾದ್ ಹಾಜಿಯವರು ಇತ್ತೀಚೆಗಷ್ಟೇ ದ.ಕ.ಜಿಲ್ಲಾ ಮದ್ರಸ ಮೆನೇಜ್ಮೆಂಟ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆಗೈಯ್ಯುತ್ತಿದ್ದ ಇವರು ಎಲ್ಲರಿಗೂ ಆತ್ಮೀಯರಾಗಿದ್ದರು ಎಂದು ಹೇಳಲಾಗಿದೆ.