ಶಿವಮೊಗ್ಗ:ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಾರ್ಷಿಕೋತ್ಸವ.

ಶಿವಮೊಗ್ಗ:ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಾರ್ಷಿಕೋತ್ಸವ.

ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಶರಾವತಿ ನಗರದಲ್ಲಿ ನಡೆಯಿತು.
ಶಿವಮೊಗ್ಗ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ , ಎನ್ಕೌಂಟರ್ ಸ್ಪೆಷಲಿಸ್ಟ್ ಎಂದು ಖ್ಯಾತರಾಗಿರುವ ಶಿವಮೊಗ್ಗ ಜಿಲ್ಲೆಯ ಪೋಲಿಸ್ ಉಪ ವರಿಷ್ಠಾಧಿಕಾರಿಗಳಾದ ಬಿ ಬಾಲುರಾಜು ಬಾಗವಹಿಸಿ ಶುಭ ಹಾರೈಸಿದರು ಕಾರ್ಯಕ್ರಮದಲ್ಲಿ ಅವರನ್ನ ಸ್ವಾಮೀಜಿಗಳು ಗೌರವಿಸಿದರು ಬಾಲರಾಜು ಅವರು 1992 ರಿಂದ 1997 ರ ವರೆಗೆ ಸುಳ್ಯದ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿದ್ದರು ನಂತರ ಅವರು ಪೋಲಿಸ್ ಇಲಾಖೆಯಸೇವೆಗೆ ಆಯ್ಕೆಯಾಗಿ ಧಕ್ಷ ಅಧಿಕಾರಿಯಾಗಿಹೆಸರು ಗಳಿಸಿದ್ದರು.

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಿರ್ದೇಶಕರಗಳಾದ ಹಿರಣ್ಣಯ್ಯ ಹೆಗಡೆ ಅವರು, ವಾಸಪ್ಪ ಗೌಡ , ಸತೀಶ್ ಡಿ.ವಿ ಗೂನಡ್ಕ , ಶ್ರೀ ಆದಿಚುಂಚನ ಶಿಕ್ಷಣ ಟ್ರಸ್ಟ್ ಭದ್ರಾವತಿ ಶಾಖೆ ಆಡಳಿತಾಧಿಕಾರಿಗಳಾದ ಜಗದೀಶ್ ಬಿ , ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಹೇಮಾ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

ರಾಜ್ಯ