
ರಾಜ್ಯ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆ ಸುಳ್ಯಕ್ಕೆ ಆಗಮಿಸಿತು. ಬಿಜೆಪಿಯ ರಾಜ್ಯಮಟ್ಟದ ನಾಯಕರಾದ ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ, ಮಾಜಿ ಮುಖ್ಯ ಮಂತ್ರಿ ಡಿ ವಿ ಸದಾನಂದ ಗೌಡ, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದರು. ಸುಳ್ಯ ನಗರದಲ್ಲಿ ಅದ್ದೂರಿ ರೋಡ್ ಶೋ ನಡೆಸಲಾಯಿತು ಸುಳ್ಯದ ವಿಷ್ಣು ಸರ್ಕಲ್ ನಿಂದ ಸಾವಿರಾರು ಬಿಜೆಪಿ ಕಾರ್ಯಕರ್ತರ ಸುಳ್ಯ ಬೀಧಿಯಲ್ಲಿ ಹೆಜ್ಜೆ ಹಾಕಿದರು,



ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಉಪಮುಖ್ಯಮಂಂತ್ರಿ ಕೆ.ಎಸ್.ಈಶ್ವರಪ್ಪ, ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವ ವಿ.ಸುನೀಲ್ ಕುಮಾರ್ , ಸಚಿವ ಎಸ್.ಅಂಗಾರ ಸಹಿತ ಹಲವು ಗಣ್ಯರು ರಾಮದಾಸ್ ಬಂಟ್ವಾಳ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಸೇರಿದಂತೆ ಹಲವು ನಾಯಕರು ತೆರೆದ ವಾಹನದಲ್ಲಿ ಸಂಕಲ್ಪ ಯಾತ್ರೆಯ ಮುಂಚೂಣಿಯಲ್ಲಿದ್ದರು, ಸುಳ್ಯ ಜ್ಯೋತೀ ಸರ್ಕಲ್ ಬಳಿ ಕಾರ್ಯಕ್ರಮ ಸಮಾಪನ ಗೊಂಡಿತು, ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಕೃತಿ ಮತ್ತು ಇಂಧನ ಸಚಿವ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಈ ದೇಶದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ನೀವು ನೋಡಿದ್ದೀರಿ. ಈ ದೇಶದ ಸಾಮಾಜಿಕ ಶಾಂತಿ, ಮತ್ತು ದೇಶದ ಅಭಿವೃದ್ಧಿಗಾಗಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವ ಅವಶ್ಯಕತೆ ಇದೆ. ಹಿಂದಿನ ಕಾಂಗ್ರೆಸ್ ಸರಕಾರ ಇದ್ದಾಗ ದೇಶದಲ್ಲಿ ಎಂತಹ ಅಶಾಂತಿಯ ವಾತಾವರಣ ಇತ್ತು ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ದೇಶದ ಅಸಹಾಯಕ ಜನರ ಬದುಕಿನ ಭರವಸೆಗಾಗಿ ಬಿಜೆಪಿ ಸರಕಾರದ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು, ಕಾರ್ಯಕ್ರಮದಲ್ಲಿ ಕಸ್ತೂರಿ ಪಂಜ, ಕಾರ್ಯದರ್ಶಿ ಪೂಜಾ ಪೈ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಜಿಲ್ಲಾ ಸಮಿತಿ ಸದಸ್ಯ ವೆಂಕಟ್ ದಂಬೆಕೋಡಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಯುವ ಮೋರ್ಚಾ ಮಂಡಲ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಎಸ್.ಎನ್.ಮನ್ಮಥ, ಎನ್.ಎ.ರಾಮಚಂದ್ರ, ಸುರೇಶ್ ಕಣೆಮರಡ್ಕ, ಜಯರಾಜ್ ಕುಕ್ಕೇಟಿ, ನವೀನ್ ಕುಮಾರ್ ಮೇನಾಲ, ಭಾಗೀರಥಿ ಮುರುಳ್ಯ, ರಾಧಾಕೃಷ್ಣ ಬೊಳ್ಳೂರು ಮತ್ತಿತರರಿದ್ದರು.
