ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಹಿನ್ನಲೆ: ಜಿಲ್ಲೆಯಾದ್ಯಂತ ಪ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ ಜಿ.ಪಂ ಸಿಇಒ ಡಾ.ಕುಮಾರ್ ಸೂಚನೆ:

ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಹಿನ್ನಲೆ: ಜಿಲ್ಲೆಯಾದ್ಯಂತ ಪ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ ಜಿ.ಪಂ ಸಿಇಒ ಡಾ.ಕುಮಾರ್ ಸೂಚನೆ:


ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಮಾದರಿ ಸಂಹಿತೆ ಜಾರಿಗೊಂಡ ಮೇರೆಗೆ ಸರಕಾರದ ಅನುದಾನವನ್ನು ಬಳಸಿಕೊಂಡು ಜಿಲ್ಲಾದ್ಯಂತ ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್‌ಗಳನ್ನು ಕೂಡಲೇ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ದ.ಕ.ಜಿಪಂ ಸಿಇಒ ಡಾ. ಕುಮಾರ್ ಸೂಚನೆ ನೀಡಿದ್ದಾರೆ.
ಜಿಪಂನಲ್ಲಿ ಬುಧವಾರ ನಡೆದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು ಅಧಿಕೃತ ಹಾಗೂ ಅನಧಿಕೃತವಾಗಿ ಹಾಕಲಾಗಿರುವ ಎಲ್ಲಾ ರೀತಿಯ ಜಾಹೀರಾತುಗಳನ್ನು ತೆರವುಗೊಳಿಸಬೇಕು, ಯಾವುದೇ ಸರಕಾರಿ ಕಚೇರಿ, ಅಧಿಕೃತ ವೆಬ್‌ಸೈಟ್‌ಗಳಲ್ಲಿ ಹಾಕಲಾಗಿರುವ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳನ್ನು ತೆರವುಗೊಳಿಸಬೇಕು ಎಂದರು.
ಸಂಬಂಧಿಸಿದ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ನಿಗದಿತ ಕಾಲಮಿತಿಯಲ್ಲಿ ವರದಿ ನೀಡಬೇಕು. ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ಗಂಭೀರವಾಗಿ ಪರಿಗಣಿಸಬೇಕು. ನಿರ್ಲಕ್ಷ್ಯತನಕ್ಕೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು, ತಹಶೀಲ್ದಾರರು, ಸಂಬಂಧಪಟ್ಟ ತಾಪಂ ಇಒ, ಪಿಡಿಒ ಮತ್ತಿತರರು ಪಾಲ್ಗೊಂಡಿದ್ದರು.

ರಾಜ್ಯ