
ಬೆಂಗಳೂರು: ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಿದೆ ಚುನಾವಣಾ ಸಮಿತಿಯ ಸಭೆಯಲ್ಲಿ ಈ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿ. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆದಿತ್ತು ಕಾಂಗ್ರೇಸನಲ್ಲಿ ಹಲವು ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟು ಸೀಟಿಗಾಗಿ ಲಾಭಿ ನಡೆಸಿದ್ದರು . ಅಂತಿಮವಾಗಿ 42 ಮಂದಿಯನ್ನು ಫೈನಲ್ ಮಾಡಲಾಗಿದೆ. ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಭಾಗಿಯಾಗಿದ್ದರು.


ಅಂತಿಮವಾಗಿ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಆ ಪಟ್ಟಿಯನ್ನು ಇಂದು ಎಐಸಿಸಿಯಿಂದ ಪ್ರಕಟಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ಹುರಿಯಾಳುಗಳನ್ನು 2ನೇ ಪಟ್ಟಿಯಲ್ಲಿ ಘೋಷಿಸಿದೆ.