
ಎ. 25 ರಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳ್ಯ ಕಾಂಗ್ರೇಸ್ ಅಭ್ಯರ್ಥಿ ಕೃಷ್ಣಪ್ಪ ಪರ ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪಿ ಸಿ ಜಯರಾಮ್ ತಿಳಿಸಿದ್ದಾರೆ ಸುಳ್ಯದಲ್ಲಿ ನಡೆದ ಸುದ್ದಿಗೋಸ್ಟಿಯಲ್ಲಿ ಅವರ ಈ ಬಗ್ಗೆ ಮಾಹಿತಿನೀಡಿ 11 ಗಂಟೆಗೆ ಸುಳ್ಯಕ್ಕೆ ಆಗಮಿಸಲಿರುವ ಮಲ್ಲಿಕಾರ್ಜುನ ಖರ್ಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಬಾಗದಲ್ಲಿ ನಡೆಯುವ ಬೃಹತ್ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ, ಸುಳ್ಯದ ಇತಿಹಾಸದಲ್ಲಿಯೇ ರಾಷ್ಟ್ರೀಯ ಪಕ್ಷವಾದ ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷರು ಸುಳ್ಯದಲ್ಲಿ ಪ್ರಚಾರ ಕಾರ್ಯಕ್ಕೆ ಬರುತ್ತಿರುವುದು, ಇದೊಂದು ಅಭೂತ ಪೂರ್ವಕ ಕಾರ್ಯಕ್ರಮವಾಗಿದ್ದು ಸಾವಿರಾರು ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು , ಈ ಸಂದರ್ಭ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.




