
ಸುಳ್ಯ :ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ ನಾವು ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ವಾಗಲ್ಲ ಪ್ರವೀಣ್ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಏನು ಮಾಡಬೇಕೋ ಅದೆಲ್ಲವನ್ನೂ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರವೀಣ್ ನಿವಾಸದಲ್ಲಿ ಹೇಳಿದ್ದಾರೆ ,ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಜೆ.ಪಿ.ನಡ್ಡಾ, ಪ್ರವೀಣ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಪ್ರವೀಣ್ ಪೋಷಕರು ಮತ್ತು ಪತ್ನಿ ನಡ್ಡಾ ಅವರನ್ನು ಹೂಗುಚ್ಛ ನೀಡಿ ಶಾಲು ಹೊದಿಸಿ ಮನೆಗೆ ಸ್ವಾಗತಿಸಿದರು. ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ನಡ್ಡಾ ಅವರು, ಪ್ರವೀಣ್ ಕೊಲೆ ತುಂಬ ದುಃಖದಾಯಕ ಮತ್ತು ಆಗಬಾರದ ಘಟನೆ ನಡೆದು ಹೋಗಿತ್ತು. ಈ ಕೃತ್ಯಕ್ಕೆ ಎಸ್ಟಿಪಿಐ ಮತ್ತು ಪಿಎಫ್ಐ ಕಾರಣವಾಗಿದ್ದು, ಘಟನೆ ನಂತರ ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಲಾಯ್ತು. ನಮ್ಮ ಸರ್ಕಾರ ಸಂಘಟನೆಯನ್ನೇ ನಿಷೇಧಿಸಿ ಎನ್ಐಎ ತನಿಖೆ ಮಾಡ್ತಿದೆ. ಆದರೆ ಇಂತಹ ಮಾನಸಿಕತೆ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ. ಪ್ರವೀಣ್ ಕುಟುಂಬಕ್ಕೆ ನ್ಯಾಯ ಸಿಗೋವರೆಗೂ ಪ್ರಯತ್ನ ಮುಂದುವರಿಯಲಿದೆ. ಕುಟುಂಬ ಸದಸ್ಯರಿಗೆ ಭರವಸೆ ನೀಡಿದರು, ಬಿ ಜೆ ಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಬಿಜೆ ಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.



