
ಮಂಗಳೂರು: ಮತದಾನದ ದಿನದಂದು ಚುನಾವಣಾ ಕರ್ತವ್ಯದ ಸಂಬಂಧ ಸಾಂದರ್ಭಿಕ ಒಪ್ಪಂದದ ಮೇರೆಗೆ ಕೆ.ಎಸ್.ಆರ್.ಟಿ.ಸಿ ಬಸ್ಸ್ ಗಳನ್ನು ನಿಯೋಜನೆ ಮಾಡಲಾಗುತ್ತಿದ್ದು, ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ.


ಮೇ.9 ಹಾಗೂ 10ರಂದು ನಿಗಮದ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವ ಕಾರಣ ಊರಿಗೆ ಪ್ರಯಾಣ ಮಾಡುವ ಪ್ರಯಾಣಿಕರು ಮುಂಚಿತವಾಗಿ ಹಂತ ಹಂತವಾಗಿ ಪ್ರಯಾಣಿಸಲು ಅನುಕೂಲವಾಗುವಂತೆ ಯೋಜಿಸಿಕೊಂಡು ನಿಗಮದ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.