
ಪೆರುವಾಜೆ ಗ್ರಾಮದ ಮುರ್ಕೆತ್ತಿ ಬಜ ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಪಂಚಯತ್ ನ ಕುಡಿಯುವ ನೀರಿನ ವ್ಯವಸ್ಥೆ ನಿಂತು ಹೋಗಿದೆ. ಈ ಭಾಗದ ಸುಮಾರು 20 ಮನೆಯವರು ನೀರಿನ ಪರ್ಯಾಯ ವ್ಯವಸ್ಥೆ ಇಲ್ಲದೆ ಪಂಚಾಯತ್ ನ ಕುಡಿಯುವ ನೀರಿನ ವ್ಯವಸ್ಥೆಯನ್ನೇ ಅವಲಂಭಿಸಿದ್ದಾರೆ. ಆದರೆ ಪಂಚಾಯತ್ ನ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ. ಪ್ರತಿ ಮನೆಗೆ ಕುಡಿಯುವ ನೀರು ಒದಗಿಸುವ ಕೇಂದ್ರ ಸರಕಾರದ ಯೋಜನೆಯೂ ಇಲ್ಲಿ ಅನುಷ್ಠಾನಗೊಂಡಿಲ್ಲ. ಮಳೆಯೂ ಸರಿಯಾಗಿ ಬರದೇ ಇಲ್ಲಿನ ನಿವಾಸಿಗಳು ರೋಸಿ ಹೋಗಿದ್ದಾರೆ. ಮತದಾನದ ದಿನ ಹತ್ತಿರವಿದ್ದರೂ ಜನಪ್ರತಿನಿಧಿನಗಳು ಕೂಡ ಸಮಸ್ಯೆ ನಿವಾರಣೆಗೆ ಮನಸ್ಸು ಮಾಡುತ್ತಿಲ್ಲ.ಇದೀಗ ಈ ಭಾಗದ ಜನರು ತಮ್ಮ ಸ್ವಂತ ವಾಹನಗಳನ್ನು ಬಳಸಿ ನೀರಿನ ಪೂರೈಕೆ ಮಾಡಿಕೊಳ್ಳುತಿರುವುದಾಗಿ ತಿಳಿದು ಬಂದಿದೆ.ಈ ಬಾರಿ ಮತದಾನ ಮಾಡದಿರಲು ಕೆಲವೊಂದ ಜನ ನಿರ್ಧರಿಸಿದ್ದಾರೆ.

