ಕಾವೂರು ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ.

ಕಾವೂರು ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ.

ಮಂಗಳೂರು: ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ಘರ್ಷಣೆ ನಡೆದ ಹಿನ್ನೆಲೆಯಲ್ಲಿ ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಾವೂರು ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಹೊರಗಿನ ವ್ಯಕ್ತಿಗಳಿಗೆ ಮೂಡುಶೆಡ್ಡೆ ವ್ಯಾಪ್ತಿಯೊಳಗೆ ಅವಕಾಶವಿಲ್ಲ. ಮೂಡುಶೆಡ್ಡೆಯ ವ್ಯಾಪ್ತಿಯ ಬಹುತೇಕ ಕಡೆ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ.ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾವುದೇ ಸಮಸ್ಯೆಯಿಲ್ಲ. ಘಟನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿಗೂ ಗಾಯವಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ

ರಾಜ್ಯ