ಪೊಲೀಸರಿಂದ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರನ್ನು ಭೇಟಿಯಾಗಲು ಪುತ್ತೂರಿಗೆ ಆಗಮಿಸಿದ ಯತ್ನಾಳ್.

ಪೊಲೀಸರಿಂದ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರನ್ನು ಭೇಟಿಯಾಗಲು ಪುತ್ತೂರಿಗೆ ಆಗಮಿಸಿದ ಯತ್ನಾಳ್.

ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದಾರೆ.
ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಪುತ್ತೂರಿನ ಪಂಚವಟಿಗೆ ಆಗಮಿಸಿದ್ದಾರೆ, ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಿಂದೂ ಮುಖಂಡ ಅರುಣ್ ಪುತ್ತಿಲ,ಬಿಜೆಪಿ ಪಕ್ಷದ ಹಲವಾರು ಮಂದಿ ನಾಯಕರು ಉಪಸ್ಥಿತರಿದ್ದರು.
ಬಳಿಕ ಅಲ್ಲಿಂದ ಪುತ್ತೂರಿನ ಮಹಹಾವೀರ ಆಸ್ಪತ್ರೆಗೆ ಆಗಮಿಸಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಈ ವೇಳೆ ಆಸ್ಪತ್ರೆಯ ಮುಂಭಾಗ ಹಲವು ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯ