ನೂತನ ಸ್ಪೀಕರ್‌ ಆಗಿ ಯು.ಟಿ ಖಾದರ್ ಅಧಿಕಾರ ಸ್ವೀಕಾರ.

ನೂತನ ಸ್ಪೀಕರ್‌ ಆಗಿ ಯು.ಟಿ ಖಾದರ್ ಅಧಿಕಾರ ಸ್ವೀಕಾರ.

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಮಂಗಳೂರು ಶಾಸಕ ಯು.ಟಿ ಖಾದರ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ
ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅನುಮೋದನೆ ನೀಡಿದರು. ಸ್ಪೀಕರ್‌ ಸ್ಥಾನಕ್ಕೆ ಯು.ಟಿ ಖಾದರ್‌ ಅವರು ಮಾತ್ರ
ನಾಮಪತ್ರ ಸಲ್ಲಿಸಿದ್ದರಿಂದ, ಸರ್ವಾನುಮತದಿಂದ ಆಯ್ಕೆಯಾದರು. ಹಂಗಾಮಿ ಸ್ಪೀಕರ್‌ ಆರ್‌.ವಿ ದೇಶಪಾಂಡೆ ಅವರು ಖಾದರ್ ಅವರ ಆಯ್ಕೆಯನ್ನು ಘೋಷಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪೀಕರ್ ಪೀಠ ಬಳಿಗೆ ಯುಟಿ ಖಾದರ್‌ ಅವರನ್ನು ಕರೆತಂದರು.ಬಳಿಕ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ, ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್ ಅವರು ಅಭಿನಂದನಾ ಭಾಷಣ ಮಾಡಿ, ನೂತನ ಸ್ಪೀಕರ್‌ಗೆ ಶುಭಾಶಯ ಕೋರಿದರು.

ರಾಜ್ಯ