ನೂತನ ಕುಮಾರಿ ಉದ್ಯೋಗ ನೇಮಕಾತಿಯಲ್ಲಿ ಎಡವಟ್ಟು ಮಾಡಿದ ಹಿಂದಿನ ಸರಕಾರ: ಬದಲಾದ ಸರಕಾರ: ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ.

ನೂತನ ಕುಮಾರಿ ಉದ್ಯೋಗ ನೇಮಕಾತಿಯಲ್ಲಿ ಎಡವಟ್ಟು ಮಾಡಿದ ಹಿಂದಿನ ಸರಕಾರ: ಬದಲಾದ ಸರಕಾರ: ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ.

: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ.
ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ, ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಭರವಸೆ ನೀಡಿದ್ದರು.
ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್‌ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2022ರ ಸೆ. 22ರಂದು ನೇಮಿಸಲಾಗಿತ್ತು. ಈಗ ಕೆಲಸದಿಂದ ಬಿಡುಗಡೆಗೊಳಿಸಿರುವ ಆದೇಶ ಅವರ ಕೈ ತಲುಪಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಅಥವಾ ಮುಂದಿನ ಆದೇಶವರೆಗೆ ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು. ನೂತನ ಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ಸ್ಥಳೀಯವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನೀಡಲಾಗಿತ್ತು. ಅವರು ಅಕ್ಟೋಬರ್ 14ರಂದು ಕರ್ತವ್ಯಕ್ಕೆ ಹಾಜರಾಗಿದ್ದರು.
ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ. ತಮ್ಮನ್ನು ಮುಂದುವರಿಸಲು ನೂತನಕುಮಾರಿ ಅವರು ಕೋರಿದರೆ ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾಜ್ಯ