ಬೆಳ್ತಂಗಡಿಯ ಕ್ರೀಡಾ ಪ್ರತಿಭೆ: ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ್ತಿಯಾಗಿದ್ದ ಹೃದಯಾಘಾತಕ್ಕೆ ಬಲಿ.
ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿ ಸಾಲಿಹಾತ್ (24) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಹಾತ್ ಒಂದು ವರ್ಷದ ಹಿಂದೆ ವಿವಾಹಿತರಾಗಿದ್ದರು. ಹೃದಯ ನೋವಿನ ಕಾರಣ ಅವರನ್ನು ಮಂಗಳೂರಿನ…










