ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಸಂಪನ್ನ:
ಸಾಕ್ಷಿಯಾದರು ,ಹತ್ತು ಲಕ್ಷಕ್ಕೂ ಅಧಿಕ ಮಂದಿ:
ಸುಳ್ಯಸೇರಿದಂತೆ ಕರಾವಳಿಯ ನೂರಾರು ಮಂದಿ ಗಣ್ಯರು- ಸದ್ಭಕ್ತರು ಭಾಗಿ.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜಾತ್ರೋತ್ಸವ ಸಂಪನ್ನಗೊಂಡಿತು. ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಮಾ.8.ರಂದು ಶ್ರೀ ಧರ್ಮ ದ್ವಜಾವರೋಹಣ, ಬಿಂದು ಸರೋವರದಲ್ಲಿ ಅವಭೃತ ಸ್ನಾನ, ಮಹಾಭಿಷೇಕ ಹಾಗೂ ಸಭಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ನಿರ್ಮಲಾನಂದನಾಥ…









