ಧರ್ಮಸ್ಥಳ ಚಲೋ – ಬಿಜೆಪಿ ಬೃಹತ್ ಸಮಾವೇಶ, ಹರಿದು ಬಂದ ಜನಸಾಗರ
ಮಂಗಳೂರು, ಸೆಪ್ಟೆಂಬರ್ 1: ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಕರ್ನಾಟಕ ಬಿಜೆಪಿ ಇಂದು “ಧರ್ಮಸ್ಥಳ ಚಲೋ” ಕಾರ್ಯಕ್ರಮವನ್ನು ಆಯೋಜಿಸಿತು. ಮಧ್ಯಾಹ್ನ 2 ಗಂಟೆಗೆ ದೇವಸ್ಥಾನದ ಹೊರವಲಯದಲ್ಲಿರುವ ಮೈದಾನದಲ್ಲಿ ಬೃಹತ್ ಸಮಾವೇಶ ಜರುಗಿತು. ಈ ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಕೇಂದ್ರ ಸಚಿವರುಗಳಾದ ಪ್ರಲ್ಹಾದ್ ಜೋಶಿ, ಶೋಭಾ…










