ಒಕ್ಕಲಿಗ ಸಮುದಾಯದ ಭಾವನೆ: ಡಿಕೆಶಿ ಸಿಎಂ ಆಗಬೇಕು – ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆ
ಹಾಸನ (ನವೆಂಬರ್ 27): ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಗೊಂದಲಗಳು ಮುಂದುವರಿದಿರುವಾಗಲೇ, ಒಕ್ಕಲಿಗ ಸಮುದಾಯದ ಪ್ರಬಲ ಧಾರ್ಮಿಕ ಕೇಂದ್ರವಾದ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (ಡಿಕೆಶಿ) ಅವರು ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಹಾಗೂ ಸಮುದಾಯದ ಭಾವನೆಯಾಗಿದೆ…

