ಮತ್ತೆ ಭೂಕುಸಿತ: ಬೆಂಗಳೂರು- ಮಂಗಳೂರು ರೈಲು ಸಂಚಾರ ಸ್ಥಗಿತ- ಬಾಳ್ಳುಪೇಟೆ ಬಳಿ ನಿಂತ ರೈಲು – ಪ್ರಯಾಣಿಕರ ಪರದಾಟ.
ಮಂಗಳೂರು (ಹಾಸನ): ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಭೂಕುಸಿತ ಉಂಟಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ರೈಲು ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ. ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ…









