ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟ ಮಹಿಳೆ : ಪೊಲೀಸರಿಂದ ತನಿಖೆ.
ಉಪ್ಪಿನಂಗಡಿ: ಮಹಿಳೆಯೊಬ್ಬರು ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿ ಘಟನೆ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ನಿಂದ ವರದಿಯಾಗಿದೆ. ದರ್ಖಾಸ್ ನಿವಾಸಿ ಹೇಮಾವತಿ (37 ) ಮೃತ ಮಹಿಳೆ. ಈ ಕುರಿತು ಕೊಲೆ ಶಂಕೆ ವ್ಯಕ್ತವಾಗಿದ್ದು, ಹೇಮಾವತಿ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ.…










