ಲೋಕಸಭಾ ಚುನಾವಣೆ 2024 :ರಾಜ್ಯದಲ್ಲಿ 1 ಗಂಟೆವರೆಗೂ 38.23% ರಷ್ಟು ಮತದಾನ-ದ.ಕದಲ್ಲಿ ಶೇ.48.10 ಮತದಾನ
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ರಾಜ್ಯದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.38.23ರಷ್ಟು ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಶೇಕಡಾವಾರು 30.10ರಷ್ಟು ಮತದಾನವಾಗಿದ್ದು, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೇ.32.25ರಷ್ಟು ಮತದಾನವಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಶೇ.36.9 ಹಾಗೂ ಬೆಂಗಳೂರು ದಕ್ಷಿಣದಲ್ಲಿ ಶೇ.31.51ರಷ್ಟು ಮತದಾನವಾಗಿದೆ.…










