ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಳ್ಳುತ್ತಿರುವ ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ, ವೇಗ ಪಡೆದುಕೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳು
ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಅಣಿಯಾಗುತ್ತಿದೆ. ಈ ಸಂಬಂಧ ಧಾರ್ಮಿಕ ವಿಧಿ ವಿಧಾನನಗಳು ಮುಂಬರುವ ಎಪ್ರಿಲ್ 13 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದೆ. ಸುಮಾರು ಆರು ವರ್ಷಗಳ ಹಿಂದೆಯೇ ಬ್ರಹ್ಮಕಲಶೋತ್ಸವಕ್ಕೆ ದೇವಸ್ಥಾನದ ಆಡಳಿತ…










