ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದಲ್ಲಿ ಚಾಲಕನೋರ್ವನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯಲ್ಲಿರುವ ಕೆರೆಗೆ ಬಿದ್ದು, ಕಾರಿನಲ್ಲಿದ್ದ 8 ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಹಾನಗಲ್ಲು ಗ್ರಾಮದ ನಿವಾಸಿ ಶಿವಣ್ಣ ಎಂಬವರು ತಮ್ಮ ತೋಟದಲ್ಲಿ ಕಾಫಿ ಕೊಯ್ದು, ಸಂಜೆ ಯಡೂರು ಮಾರ್ಗವಾಗಿ ಬರುವಾಗ…










