ಶಿಕ್ಷಣ ಕ್ರಾಂತಿಯ ಹರಿಕಾರ, ಆಧುನಿಕ ಸುಳ್ಯದ ನಿರ್ಮಾತೃ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಹುಟ್ಟುಹಬ್ಬದ ಪ್ರಯುಕ್ತ ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ನುಡಿ ನಮನ ಕಾರ್ಯಕ್ರಮ ನಡೆಯಿತು .ಕಾಲೇಜಿನ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ ಕುರುಂಜಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಹಾರಾರ್ಪಣೆ ಮಾಡಿ ನುಡಿ ನಮನ ಸಲ್ಲಿಸಿದರು.ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
add a comment