ಸುಳ್ಯ ಶಾಖಾ ಗ್ರಂಥಾಲಯ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದ ಉದ್ಘಾಟನೆ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಅಗತ್ಯ-ಎಸ್.ಅಂಗಾರ


ಸ್ಪರ್ಧಾತ್ಮಕವಾದ ಯುಗದಲ್ಲಿ ವಿದ್ಯಾರ್ಥಿಗಳು ಸ್ಫರ್ಧೆ ನೀಡಬೇಕಾದರೆ ತರಬೇತಿ ಅಗತ್ಯ. ಕಲಿತ ವಿದ್ಯೆ ವಿದ್ಯಾರ್ಥಿಗಳಲ್ಲಿ ಫಲಪ್ರಧ ವಾಗಬೇಕಾದರೆ ಶಿಕ್ಷಣದ ಜೊತೆಗೆ ಸ್ಫರ್ಧಾತ್ಮಕ ಪರೀಕ್ಷೆಗಳ ತಯಾರಿ ಅತೀ ಅಗತ್ಯ ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.
ಅವರು ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಗ್ರಂಥಾಲಯ ಮಂಗಳೂರು, ಸುಳ್ಯ ಶಾಖಾ ಗ್ರಂಥಾಲಯ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ನಮ್ಮ ಜಿಲ್ಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಅವರು ಯಾವತ್ತು ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಮುಖ ಮಾಡುವುದಿಲ್ಲ. ವೈದ್ಯರು, ಇಂಜಿನಿಯರ್ ಆಗುವ ವಿದ್ಯಾರ್ಥಿಗಳು ತಮ್ಮ ಮಾನಸಿಕತೆ ಬದಲಾಯಿಸಿಕೊಳ್ಳಬೇಕು. ಇಚ್ಚಾಶಕ್ತಿ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಯನ್ನು ವಿದ್ಯಾರ್ಥಿಗಳು ಮಾಡಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಧಿಕಾರಿ ಡಾ. ಕುಮಾರ್ ಮಾತನಾಡಿ ಕಲಿಕೆಯಲ್ಲಿ ವಿದ್ಯಾರ್ಥಿಗಳಿಗೆ ನಿರ್ಧಿಷ್ಟವಾದ ಗುರಿ ಬೇಕು. ಈ ಗುರಿಗೆ ಸರಿಯಾದ ಧಾರಿ ವಿದ್ಯಾರ್ಥಿಗಳಲ್ಲಿ ಇರಬೇಕು. ಪ್ರತಿಯೊಬ್ಬರಿಗೂ ಕನಸುಗಳಿರಬೇಕು. ಈ ಕನಸು ನನಸು ಮಾಡಿಕೊಳ್ಳುವ ಮೂಲಕ ಸಮಾಜಕ್ಕೆ , ಕುಟುಂಬಕ್ಕೆ ಒಳ್ಳೆಯ ವ್ಯಕ್ತಿಗಳಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಪಂಚಾಯಿತಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ವಹಿಸಿದ್ದರು. ವೇದಿಕೆಯಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ, ಖ್ಯಾತ ಸಾಹಿತಿ ಡಾ. ಪ್ರಭಾಕರ್ ಶಿಶಿಲ, ತಹಸೀಲ್ದಾರ್ ಕು.ಅನಿತಾಲಕ್ಷ್ಮಿ, ನ.ಪಂ. ಸದಸ್ಯೆ ಶೀಲಾ ಕುರುಂಜಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎನ್. ಭವಾನಿಶಂಕರ್, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಕೆ.ಕೃಷ್ಣ ಉಪಸ್ಥಿತರಿದ್ದರು.
ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಗಾಯತ್ರಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.


