ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಶಬರಿಮಲೆ ಸನ್ನಿಧಾನದ ಸಮೀಪ ಕಾಣಿಸಿಕೊಂಡ ಕಾಳಿಂಗ ಸರ್ಪ
ಧಾರ್ಮಿಕ ರಾಜ್ಯ

ಶಬರಿಮಲೆ ಸನ್ನಿಧಾನದ ಸಮೀಪ ಕಾಣಿಸಿಕೊಂಡ ಕಾಳಿಂಗ ಸರ್ಪ

ಶಬರಿಮಲೆ ಜನವರಿ 13: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಪ್ರಾಂಗಣದಲ್ಲಿ ಭಾನುವಾರ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಅರಣ್ಯ ಸಿಬ್ಬಂದಿ ಅದನ್ನು ರಕ್ಷಿಸಿದ್ದಾರೆ. ಬೆಳಗ್ಗೆ ಸನ್ನಿಧಾನದ ಒಳಗಿನ ಭಸ್ಮಾಕುಳಂನಲ್ಲಿ ಕಾಳಿಂಗ ಪತ್ತೆಯಾಗಿದೆ. ಕೂಡಲೇ ಎಚ್ಚೆತ್ತ ಅರಣ್ಯ ಸಿಬ್ಬಂದಿ, ನುರಿತ ಉರಗ ರಕ್ಷಕರಿಂದ ಕಾಳಿಂಗ ಸರ್ಪವನ್ನು ರಕ್ಷಿಸಿದ್ದಾರೆ. ಬಳಿಕ ಸುರಕ್ಷಿತವಾಗಿ ದಟ್ಟಾರಣ್ಯದಲ್ಲಿ…

ದುಬೈ ಕಾರು ರೇಸಿಂಗ್ ಸ್ಪರ್ಧೆಯಲ್ಲಿ ನಟ ಅಜಿತ್‌ಗೆ 3ನೇ ಸ್ಥಾನ: ಅಭಿನಂದನೆಗಳ ಮಹಾಪೂರ
ಕ್ರೀಡೆ ರಾಷ್ಟ್ರೀಯ

ದುಬೈ ಕಾರು ರೇಸಿಂಗ್ ಸ್ಪರ್ಧೆಯಲ್ಲಿ ನಟ ಅಜಿತ್‌ಗೆ 3ನೇ ಸ್ಥಾನ: ಅಭಿನಂದನೆಗಳ ಮಹಾಪೂರ

ದುಬೈ 24 ಎಚ್ 2025’ ಕಾರು ರೇಸಿಂಗ್‌ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಗಳಿಸಿರುವ ತಮಿಳು ನಟ ಅಜಿತ್‌ ಕುಮಾರ್‌ ಮತ್ತು ಅವರ ತಂಡಕ್ಕೆ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್‌ ಮತ್ತು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅಭಿನಂದಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಉದಯನಿಧಿ…

ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ದಾರುಣ ಸಾವು
ರಾಜ್ಯ

ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ದಾರುಣ ಸಾವು

ಕಾಸರಗೋಡು : ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ದಾರುಣವಾಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ಕುಂಬಳೆಯಲ್ಲಿ ನಡೆದಿದೆ. ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ ಮಗು. ಅನಾಸ್ ಶನಿವಾರ ಸಂಜೆ ಮನೆಯಲ್ಲಿ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದೆ.…

ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು
ರಾಜ್ಯ

ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಚಾಮರಾಜಪೇಟೆಯ ಓಲ್ಡ್ ಪೆನ್ಮನ್ ಮೊಹಲ್ಲಾದಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ರಕ್ತದ ಕೋಡಿಯನ್ನೇ ಹರಿಸಿದ್ದಾರೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.…

ಪುತ್ತೂರು : ಅಂತರ್ ರಾಜ್ಯ ಮನೆ ಕಳ್ಳನ ಬಂಧನ ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ
ರಾಜ್ಯ

ಪುತ್ತೂರು : ಅಂತರ್ ರಾಜ್ಯ ಮನೆ ಕಳ್ಳನ ಬಂಧನ ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದ ಆರೋಪಿಯನ್ನು ಪೊಲೀಸರ ವಿಶೇಷ ತಂಡ ಬಂಧಿಸಿದೆ. ಕಾಸರಗೋಡು ಜಿಲ್ಲೆಯ ಉಪ್ಪಳ ಗುಡ್ಡೆಮನೆ ನಿವಾಸಿ, ಪ್ರಸ್ತುತ ಕಾಸರಗೋಡು ಮಂಜೇಶ್ವರ ಹೊಸಂಗಡಿ ಮೂಡಂಬೈಲು ನವಿಲು ಗಿರಿ ನಿವಾಸಿ ಸೂರಜ್‌ ಕೆ. (36) ಬಂಧಿತ…

ಬೆಳ್ಳಾರೆ : ಮಾರಕಾಸ್ತ್ರಗಳಿಂದ ಯುವಕನ ಮೇಲೆ ದಾಳಿ ಆರೋಪ; ಆಸ್ಪತ್ರೆಗೆ ಯುವಕ ದಾಖಲು
ರಾಜ್ಯ

ಬೆಳ್ಳಾರೆ : ಮಾರಕಾಸ್ತ್ರಗಳಿಂದ ಯುವಕನ ಮೇಲೆ ದಾಳಿ ಆರೋಪ; ಆಸ್ಪತ್ರೆಗೆ ಯುವಕ ದಾಖಲು

ಬೆಳ್ಳಾರೆ ಪೇಟೆಯಲ್ಲಿ ತಂಡವೊಂದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿ ಗಂಭಿರ ಗಾಯಗೊಳಿಸಿದ ಘಟನೆಯೊಂದು ಜ.11 ರ ರಾತ್ರಿ ನಡೆದಿದೆ. ಗಾಯಗೊಂಡ ಯುವಕನನ್ನು ಸುಳ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಳ್ಳಾರೆ ಪೇಟೆಯಲ್ಲಿ ರಾತ್ರಿ ಸಮಯದಲ್ಲಿ ಆಶೀರ್‌ ಎಂಬ ಯುವಕ ಬೈಕ್‌ನಲ್ಲಿ ಬರುತ್ತಿದ್ದಾಗ ಕಬ್ಬಿಣದ ರಾಡ್‌ ಮೂಲಕ ತಲೆಗೆ ಹೊಡೆದು ಕೊಲೆಗೆ…

ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
ರಾಜ್ಯ

ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

ಮಲ್ಪೆ: ಗೆಳೆಯರೊಂದಿಗೆ ಮೈಸೂರಿನಿಂದ ಮಲ್ಪೆಗೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿಯೋರ್ವರು ಹೋಮ್‌ ಸ್ಟೇಯಲ್ಲಿ ವಿಶ್ರಾಂತಿ ಪಡೆಯುತ್ತಿರುವಾಗ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಅನಿಲ್‌ ಕುಮಾರ್‌ (52) ಎಂದು ಗುರುತಿಸಲಾಗಿದೆ. ತನ್ನ ಗೆಳೆಯರಾದ ಉಮೇಶ, ಮನೋಜ್‌ ಅಗರವಾಲ್‌, ಶಿವಕುಮಾರ್‌ ಕೆ.ಜೆ., ಗಂಗಾಧರ್‌ ಆರ್‌ ಮತ್ತು ವೆಕಟೇಶ್‌…

ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು; ಟ್ರಕ್ ಬೆಂಕಿಗೆ ಆಹುತಿ
ರಾಜ್ಯ

ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು; ಟ್ರಕ್ ಬೆಂಕಿಗೆ ಆಹುತಿ

ಕಾಪು: ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ‌. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ. ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ…

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ; ಶಿಕ್ಷೆ ಪ್ರಕಟ
ರಾಜ್ಯ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ; ಶಿಕ್ಷೆ ಪ್ರಕಟ

ಮಂಗಳೂರು: ಪಾರ್ಟಿಗೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ ನಡೆಸಿದ ಹಂಪನಕಟ್ಟೆ ಲೈಟ್‌ಹೌಸ್‌ ಹಿಲ್‌ ರೋಡ್‌ ನಿವಾಸಿ ಬ್ರಯಾನ್‌ ರಿಚರ್ಡ್‌ ಅಮನ್ನಾ (34) ಎಂಬಾತನಿಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿದೆ. ನೊಂದ ಯುವತಿಗೆ…

ಮಂಗಳೂರು : ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ
ರಾಜ್ಯ

ಮಂಗಳೂರು : ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

ಮಂಗಳೂರು: ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಮಣ್ಣಗುಡ್ಡೆ ದುರ್ಗಾ ಮಹಲ್‌ ಬಳಿ ಅಮಲಿನಲ್ಲಿದ್ದ ಕುಂಜತ್ತಬೈಲು ನಿವಾಸಿ ನತಾಶ್‌ (23)ನನ್ನು ಬರ್ಕೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆತ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ತಪಾಸಣೆ ನಡೆಸಿದಾಗ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI