ಬೆಂಗಳೂರು ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿ: ದರ ಏರಿಕೆ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ
ಬೆಂಗಳೂರು: ದೆಹಲಿ, ಮುಂಬೈ ಮತ್ತು ಚೆನ್ನೈನಂತಹ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರು ಮೆಟ್ರೋ ಪ್ರಯಾಣ ದರ ಈಗ ದುಪ್ಪಟ್ಟಾಗಿದೆ. ರಾಜ್ಯ ಸರ್ಕಾರದ ನಿರ್ಲಕ್ಷ್ಯ ಹಾಗೂ ದರ ನಿಗದಿಯಲ್ಲಿನ ಲೋಪದೋಷಗಳಿಂದಾಗಿ ನಮ್ಮ ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿ ಸಾರಿಗೆಯಾಗಿ ಮಾರ್ಪಟ್ಟಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಶನಿವಾರ ಕಿಡಿಕಾರಿದ್ದಾರೆ.…



























