ಅಂತರಾಷ್ಟ್ರೀಯ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ
ಅಂತರಾಷ್ಟ್ರೀಯ ಕ್ರೀಡೆ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ

ಭಾರತ ಹಾಗೂ ಐರ್ಲೆಂಡ್ ನಡುವಿನ ಟಿ20 ಕ್ರಿಕೆಟ್ ಸರಣಿಯಲ್ಲಿ ಟೀಮ್ ಇಂಡಿಯಾಗೆ ತೀವ್ರ ನಿರಾಶೆಯಾಗಿದೆ. ಭಾನುವಾರ ಬೆಲ್‌ಫಾಸ್ಟ್‌ನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಎರಡನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಭಾರತ ತಂಡ, 11ನೇ ರ‍್ಯಾಂಕಿಂಗ್‌ನಲ್ಲಿರುವ ಐರ್ಲೆಂಡ್ ವಿರುದ್ಧ 1 ರನ್‌ನಿಂದ ಆಘಾತಕಾರಿ ಸೋಲು ಕಂಡು ಸರಣಿಯನ್ನು ಕೈಚೆಲ್ಲಿದೆ.ಇದರೊಂದಿಗೆ 2 ಪಂದ್ಯಗಳ ಸರಣಿಯನ್ನು ಐರ್ಲೆಂಡ್ 2-0 ಅಂತರದಿಂದ ವಶಪಡಿಸಿಕೊಂಡು, ಭಾರತದ ವಿರುದ್ಧ ತನ್ನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಜಲೀಲ್ ಹತ್ಯೆ ಪ್ರಕರಣ: ಹಲವರ ವಿಚಾರಣೆ:ಮೂವರು ಆರೋಪಿಗಳ ಬಂಧನ ..

ಮಂಗಳೂರು ನಗರದ ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರ ಪೈಕಿ ಇಬ್ಬರು ಕೃತ್ಯ ಎಸಗಿದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಪರಾರಿಯಾಗಲು ನೆರವಾದವನು. ಆರೋಪಿಗಳನ್ನು ರವಿವಾರ…

ದಕ್ಷಿಣಕನ್ನಡ ಜಿಲ್ಲೆಗೆ ಕೊರೊನಾ ಮಾರ್ಗಸೂಚಿ ಪ್ರಕಟ….!!
ರಾಜ್ಯ

ದಕ್ಷಿಣಕನ್ನಡ ಜಿಲ್ಲೆಗೆ ಕೊರೊನಾ ಮಾರ್ಗಸೂಚಿ ಪ್ರಕಟ….!!

ಮಂಗಳೂರು ಡಿಸೆಂಬರ್ 26: ಹೊರ ದೇಶಗಳಲ್ಲಿ ಕೊರೊನಾ ರೂಪಾಂತರ ತಳಿ ಆರ್ಭಟ ಹೆಚ್ಚಾಗುತ್ತಿರುವ ಹಿನ್ನಲೆ ಇದೀಗ ದೇಶದಲ್ಲೂ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.ಹೊರಾಂಗಣ ಮತ್ತು ಒಳಾಂಗಣದಲ್ಲಿ ಜನಜಂಗುಳಿಯಿರುವೆಡೆಗಳಲ್ಲಿ ಮಾಸ್ಕ್‌ ಧರಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.ಶಾಪಿಂಗ್ ಮಾಲ್, ಕಚೇರಿಗಳು, ಸಿನೆಮಾ ಹಾಲ್,…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.
ರಾಜ್ಯ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ 94ನೇ ಹುಟ್ಟು ಹಬ್ಬದ ಪ್ರಯುಕ್ತ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಸ್ಥಾಪಕರ ದಿನಾಚರಣೆ ಡಿ. 26ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ಸಂಚಾಲಕ ಡಾ. ರೇಣುಕಾಪ್ರಸಾದ್…

ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮದಿನಾಚರಣೆ, ಪ್ರೆಸ್ ಕ್ಲಬ್ ವತಿಯಿಂದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ.
ರಾಜ್ಯ

ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮದಿನಾಚರಣೆ, ಪ್ರೆಸ್ ಕ್ಲಬ್ ವತಿಯಿಂದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ.

ಶಿಕ್ಷಣ ಬ್ರಹ್ಮ ಡಾ.ಕುರುಂಜಿ ವೆಂಕಟ್ರಮಣ ಗೌಡರ ಹುಟ್ಟು ಹಬ್ಬವನ್ನು ಸುಳ್ಯದ ಪತ್ರಕರ್ತರು ಭವ್ಯ ಸುಳ್ಯ ಸಂಕಲ್ಪ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದ್ದು ಇಂದು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯಿತು.ಬಸ್ ನಿಲ್ದಾಣದಲ್ಲಿ ಇರುವ ಡಾ.ಕುರುಂಜಿಯವರ ಪುತ್ಥಳಿಗೆ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಮಾಲಾರ್ಪಣೆ ಮಾಡಿ,ಬಳಿಕ ಕುರುಂಜಿಯವರ ಆಶಯದ…

ಪುತ್ತೂರು : ರಿಕ್ಷಾ – ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು

ಪುತ್ತೂರು: ಬೈಕ್ ಸವಾರ ರಿಕ್ಷಾಕ್ಕೆ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಡಿ.25ರಂದು ನಡೆದಿದೆ.ಕಾಣಿಯೂರು-ಸುಬ್ರಹ್ಮಣ್ಯ ರಸ್ತೆಯ ಮುಕ್ವೆ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಕಾಣಿಯೂರಿನಿಂದ ಪುತ್ತೂರಿಗೆ ಹೋಗುತ್ತಿದ್ದ ರಿಕ್ಷಾಕ್ಕೆ ಮುಕ್ವೆಯಲ್ಲಿ ಮತ್ತೊಂದು ರಸ್ತೆಯಿಂದ ಬಂದ ಬೈಕ್ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ರಿಕ್ಷಾವೂ…

ಸುರತ್ಕಲ್ ಜಲೀಲ್ ಹತ್ಯೆ -ಹಳೇ ರೌಡಿಶೀಟರ್ ಪುತ್ರನ
ಕೈವಾಡದ ಶಂಕೆ.

ಮಂಗಳೂರು ಹೊರವಲಯದ ಕಾಟಿಪಳ್ಳದ ೪ನೇ ಬ್ಲಾಕ್ ನೈತಂಗಡಿ ಎಂಬಲ್ಲಿ ಜಲೀಲ್ಎಂಬವರನ್ನು ನಿನ್ನೆ ಸಂಜೆ ಚಾಕುವಿನಿಂದ ಇರಿದು ಕೊಲೆಮಾಡಲಾಗಿತ್ತು. ಲತೀಫ ಎಂಬ ಫ್ಯಾನ್ಸಿ ಅಂಗಡಿನಡೆಸುತ್ತಿದ್ದ ಜಲೀಲ್ ಅಂಗಡಿಗೆ ನುಗ್ಗಿ ದುಷ್ಕರ್ಮಿಗಳುಚೂರಿಯಿಂದ ಇರಿದು ಪರಾರಿಯಾಗಿದ್ದರು.ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯರುಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಜಲೀಲ್ ಉಸಿರು ಚೆಲ್ಲಿದ್ದರು.ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸ್ಥಳಕ್ಕೆ…

ಬಿಜೆಪಿಯಿಂದ ಹೊರಬಂದ ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ.
ರಾಜ್ಯ

ಬಿಜೆಪಿಯಿಂದ ಹೊರಬಂದ ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ.

ಬೆಂಗಳೂರು: ಬಿಜೆಪಿಯಿಂದ ಹೊರ ಬಂದಿದ್ದು, ಸ್ವತಂತ್ರವಾಗಿ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ರಾಜಕೀಯ ಪಕ್ಷವನ್ನು ಆರಂಭಿಸಲಾಗುವುದು ಎಂದು ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಘೋಷಿಸಿದರು.ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಬಿಜೆಪಿಗಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ಸ್ವಂತ ಕೆಲಸ ಬದಿಗೊತ್ತಿ ಪಕ್ಷಕ್ಕಾಗಿ ದುಡಿದಿದ್ದೆ. ಆದರೆ,…

ಉಪ್ಪಿನಂಗಡಿ – ಕುದುರೆಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್: ಕುದುರೆ ಸಾವು:     ಸವಾರ ಗಂಭೀರ.
ರಾಜ್ಯ

ಉಪ್ಪಿನಂಗಡಿ – ಕುದುರೆಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್: ಕುದುರೆ ಸಾವು: ಸವಾರ ಗಂಭೀರ.

ಬೆಳ್ತಂಗಡಿ ಡಿಸೆಂಬರ್ 25: ಕುದುರೆಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರರಾಗಿದ್ದಾರೆ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ…

ಸುರತ್ಕಲ್ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ : ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ : ಡಾ|| ಚೂಂತಾರು
ರಾಜ್ಯ

ಸುರತ್ಕಲ್ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ : ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ : ಡಾ|| ಚೂಂತಾರು

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುರತ್ಕಲ್ ಘಟಕದ ವತಿಯಿಂದ ಡಿ.೨೫ ರಂದು ಸುರತ್ಕಲ್ ಲೈಟ್ ಹೌಸ್ ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಕಾರ್ಯಕ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡರ್ ಡಾ.ಮುರಲೀ…

ಮಂಗಳೂರು:ಸುರತ್ಕಲ್, ಬಜಪೆ,ಕಾವೂರು, ಪಣಂಬೂರಿನಲ್ಲಿನಿಷೇಧಾಜ್ಞೆ ಜಾರಿ,ಮದ್ಯ ಮಾರಾಟ ನಿಷೇಧ:ಕಮೀಷನರ್ ಶಶಿಕುಮಾರ್ ಆದೇಶ.
ರಾಜ್ಯ

ಮಂಗಳೂರು:ಸುರತ್ಕಲ್, ಬಜಪೆ,ಕಾವೂರು, ಪಣಂಬೂರಿನಲ್ಲಿನಿಷೇಧಾಜ್ಞೆ ಜಾರಿ,ಮದ್ಯ ಮಾರಾಟ ನಿಷೇಧ:ಕಮೀಷನರ್ ಶಶಿಕುಮಾರ್ ಆದೇಶ.

ಮಂಗಳೂರು: ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದ ಫ್ಯಾನ್ಸಿ ಸ್ಟೋರ್ ಮಾಲಕ ಜಲೀಲ್ ಹತ್ಯೆ ಪ್ರಕರಣಕ್ಕೆಸಂಬಂಧಿಸಿದಂತೆ, ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಬಜಪೆ ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಹಾಗೂ ಮದ್ಯ ಮಾರಾಟ ನಿಷೇಧಜಾರಿಗೊಳಿಸಲಾಗಿದೆಈ ಬಗ್ಗೆ ಮಂಗಳೂರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI