ರಾಜ್ಯ

ಪ್ರಧಾನಿ ತಾಯಿ ನಿಧನಕ್ಕೆ ಆದಿಚುಂಚನಗಿರಿ ಮಠದ ಮಹಾ ಸ್ವಾಮೀಜಿ ಜಗದ್ಗುರು ಶ್ರೀ ನಿರ್ಮಲನಂದನಾಥರು ಸಂತಾಪ ಸೂಚನೆ.


ದೇಶದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿರವರ
ತಾಯಿ ನಿಧನಕ್ಕೆ ಆದಿಚುಂಚನಗಿರಿ ಮಹಾಮಠದ ಸ್ವಾಮೀಜಿ ಶ್ರೀ ನಿರ್ಮಲನಂದನಾಥರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹೀರಾಬೆನ್ ಜಿ ರವರು ಇನ್ನಿಲ್ಲವಾದುದು ಅತ್ಯಂತ ದುಃಖದ ಸಂಗತಿ. ಭವ್ಯ ಭಾರತಕ್ಕೆ ಸಮರ್ಥ ಪ್ರಧಾನಿಯನ್ನು ನೀಡಿದಂತಹ ಶ್ರೀಮತಿ ಹೀರಾ ಬೆನ್ ಜಿ ಅವರ ನಿಧನದಿಂದ ಭಾರತ ಹಿರಿಯ ಚೇತನವೊಂದನ್ನುಕಳೆದುಕೊಂಡಂತಾಗಿದೆ. ಭಾರತವನ್ನು ಮುನ್ನಡೆಸುವ ಸಮರ್ಥ ಪ್ರಧಾನಿಯನ್ನ ನಮ್ಮೆಲ್ಲರಿಗೂ ಕೊಡುಗೆಯಾಗಿ ನೀಡಿದ ಆ ತಾಯಿ ತಮ್ಮ ಮಕ್ಕಳಿಗೆ ನೀಡಿರುವ ಸಂಸ್ಕಾರ ಆದರ್ಶನೀಯ. ಹೀರಾಬೆನ್ ಜಿ ರವರ ನಿಧನದಿಂದ ದುಃಖಿತರಾಗಿರುವ ಕುಟುಂಬ ವರ್ಗ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ, ಅವರ ಬಂಧು ವರ್ಗದವರಿಗೆ ಭಗವಂತನು ದುಃಖವನ್ನು ಸಹಿಸುವ ಶಕ್ತಿಯನ್ನು, ಮಾತೆ ಹೀರಾಬೆನ್ ಜಿ ರವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲೆಂದು ಆಶಿಸುತ್ತೇವೆ ಎಂದು ಸ್ವಾಮೀಜಿಗಳು ಸಂತಾಪ ವ್ಯಕ್ತಪಡಿಸಿ ಸಂದೇಶ ರವಾನಿಸಿದ್ದಾರೆ.

Leave a Response

error: Content is protected !!