ಅಲ್ಪಸಂಖ್ಯಾತರ ಬಾಲಕರ ಹಾಸ್ಟೆಲ್‌ಗೆ ಭೇಟಿ ನೀಡಿದ ಸಚಿವ ಝಮೀರ್ ಅಹ್ಮದ್ ಖಾನ್.ಅಲ್ಪಸಂಖ್ಯಾತರ ಇಲಾಖೆ ಮಂಗಳೂರು ತಾಲೂಕು ವಿಸ್ತರಣಾಧಿಕಾರಿ ಮಂಜುನಾಥ್ ಅಮಾನತು.

ಅಲ್ಪಸಂಖ್ಯಾತರ ಬಾಲಕರ ಹಾಸ್ಟೆಲ್‌ಗೆ ಭೇಟಿ ನೀಡಿದ ಸಚಿವ ಝಮೀರ್ ಅಹ್ಮದ್ ಖಾನ್.
ಅಲ್ಪಸಂಖ್ಯಾತರ ಇಲಾಖೆ ಮಂಗಳೂರು ತಾಲೂಕು ವಿಸ್ತರಣಾಧಿಕಾರಿ ಮಂಜುನಾಥ್ ಅಮಾನತು.

ಮಂಗಳೂರು ತಾಲೂಕು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಮಂಜುನಾಥ್ ಅವರನ್ನು ಸಚಿವ ಝಮೀರ್ ಅಹ್ಮದ್ ಖಾನ್ ಅಮಾನತುಗೊಳಿಸಿದ್ದಾರೆ.ನಗರದ ವಿಲ್ಸನ್‌ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಬಾಲಕರ ಹಾಸ್ಟೆಲ್‌ಗೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿದ ಸಚಿವರು ಅಲ್ಲಿನ ಅವ್ಯವಸ್ಥೆ ಕಂಡು ಆಕ್ರೋಶಿತರಾಗಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ತಕ್ಷಣ ತಾಲೂಕು ವಿಸ್ತರಣಾಧಿಕಾರಿಯನ್ನು ಅಮಾನತುಗೊಳಿಸಿದರಲ್ಲದೆ ಡಿಎಂಒ ಸಹಿತ ಇಬ್ಬರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಈ ಸಂದರ್ಭ ಸಚಿವ ರಹೀಂ ಖಾನ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮತ್ತಿತರರಿದ್ದರು

ರಾಜ್ಯ