
ಪುತ್ತೂರು: ಹಿಂದೂ ದೇವಸ್ಥಾನದ ಒಳಗೆ ಅನ್ಯಮತೀಯ ವ್ಯಕ್ತಿ ಯಿಂದ ದೇವಸ್ಥಾನದ ಒಳಗೆ ಕ್ಯಾಮರಾ ಬಳಕೆ ನಿಷೇಧವಾಗಿದ್ದರೂ ಭಾವಚಿತ್ರ ತೆಗೆದಿದ್ದಾರೆ ಎಂದು ಆರೋಪಿಸಿ ಪುತ್ತಿಲ ಪರಿವಾರ ಆಡಳಿತ ಮಂಡಳಿಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ಘಟನೆಯನ್ನು ತೀವ್ರವಾಗಿ ಖಂಡಿಸಿದ ಪುತ್ತಿಲ ಪರಿವಾರ ಆಕ್ರೋಶ ಹೊರಹಾಕಿದೆ. ಭಾವಚಿತ್ರ ತೆಗೆದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯಾದರೆ ದೇವಸ್ಥಾನದ ಆಡಳಿತ ಮಂಡಳಿ ನೇರ ಹೊಣೆಯಾಗಿರುತ್ತದೆ. ದೇವಸ್ಥಾನದಲ್ಲಿನ ಹಾಗೂ ಭಕ್ತರ ನಂಬಿಕೆಗೆ ಧಕ್ಕೆಯಾದಲ್ಲಿ ಪುತ್ತಿಲ ಪರಿವಾರದಿಂದ ತೀವ್ರ ಹೋರಾಟ ನಡೆಸಲಾಗುವುದು. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪುತ್ತಿಲ ಪರಿವಾರ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಮಾಡಿದೆ, ಈ ವೇಳೆ ಪುತ್ತಿಲ ಪರಿವಾರದ ನಗರಾಧ್ಯಕ್ಷರಾದ ಅನಿಲ್ ತೆಂಕಿಲ, ಪುತ್ತಿಲ ಪರಿವಾರ ಪುತ್ತೂರು ಸಮಿತಿಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕೊಡಿಬೈಲು, ಪುತ್ತಿಲ ಪರಿವಾರದ ಪ್ರಮುಖರಾದ ಪ್ರವೀಣ್ ತಿಂಗಳಾಡಿ, ಪ್ರವೀಣ್ ಶೆಟ್ಟಿ, ರೂಪೇಶ್ ನಾಯ್ಕ್, ಮನೀಶ್, ಕೆ.ಪಿ. ಶೆಟ್ಟಿ ಮಹಬಲ ಉಪಸ್ಥಿತರಿದ್ದರು.

