ರಾಜ್ಯ

ಅಪಘಾತದಲ್ಲಿ ಗಾಯ ಗೊಂಡಿದ್ದ ವ್ಯಕ್ತಿ ಸಾವು.

ಸುಳ್ಯ: ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕೂರು ಗ್ರಾಮದ ಜ್ಯೋತಿಷಿ ವಾಸುದೇವ ಗೌಡ ಚಾರ್ಮತ(44) ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.ಮೇ.27ರಂದು ನಡುಗಲ್ಲಿನ ಅಂಜೇರಿ ಎಂಬಲ್ಲಿ ಬೈಕ್ ಸ್ಕಿಡ್ ಆದ ಪರಿಣಾಮ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿತ್ತು.ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆನ್ನುವ ಮಾಹಿತಿ ಲಭ್ಯವಾಗಿದೆ.
ವಾಸುದೇವ ಗೌಡ ಚಾರ್ಮತ ಅವರು ಗುತ್ತಿಗಾರಿಗೆ ಬಂದು ನಡುಗಲ್ಲಿಗೆ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿದ್ದು,ಗಂಭೀರ ಗಾಯಗೊಂಡ ಅವರನ್ನು ಸುಳ್ಯದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು.ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರಿಗೆ ಪ್ರಜ್ಞೆ ಬಂದ ಮೇಲಷ್ಟೆ ತಲೆಯ ಶಸ್ತ್ರಚಿಕಿತ್ಸೆಗೆ ನಿರ್ಧರಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಇಂದು ಅವರು ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ

Leave a Response

error: Content is protected !!