ಬಂಗ್ಲೆಗುಡ್ಡೆ ಸ.ಹಿ.ಪ್ರಾ ಶಾಲೆಯಲ್ಲಿ ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ವತಿಯಿಂದ ಪರಿಸರ ಕಾರ್ಯಕ್ರಮ

ಬಂಗ್ಲೆಗುಡ್ಡೆ ಸ.ಹಿ.ಪ್ರಾ ಶಾಲೆಯಲ್ಲಿ ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ವತಿಯಿಂದ ಪರಿಸರ ಕಾರ್ಯಕ್ರಮ

ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.19 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇವುಗಳ ಆಶ್ರಯದಲ್ಲಿ ಪರಿಸರ ಕಾರ್ಯಕ್ರಮ ನಡೆಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯಾಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಕಮಲ.ಎ, ಕೊಲ್ಲಮೊಗ್ರು ಅರಣ್ಯ ಸಂರಕ್ಷಕರಾದ ಶಿವಾನಂದ ಕುದಿರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ರಾಜೇಶ್.ಕೆ, ಕೃಷಿ ಮೇಲ್ವಿಚಾರಕರಾದ ರಮೇಶ್, ಶಿರೂರು-ಚಾಂತಾಳ ಒಕ್ಕೂಟದ ಅಧ್ಯಕ್ಷರಾದ ಇಂದಿರಾ ಚಾಳೆಪ್ಪಾಡಿ, ಕೊಲ್ಲಮೊಗ್ರು ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಪದ್ಮಾವತಿ, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಶಿಕ್ಷಕರಾದ ಸುಭಾಷ್ ಸ್ವಾಗತಿಸಿ, ಶಿರೂರು-ಚಾಂತಾಳ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಶೋಭಾ ಧನ್ಯವಾದ ಸಮರ್ಪಿಸಿದರು. ವಲಯ ಮೇಲ್ವಿಚಾರಕರಾದ ರಾಜೇಶ್.ಕೆ ಕಾರ್ಯಕ್ರಮ ನಿರೂಪಿಸಿದರು.

ರಾಜ್ಯ