
ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ಯುವ ಘಟಕ ಹಾಗೂ ಮಹಿಳಾ ಸಂಘ ಗೌಡರ ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ಇವುಗಳ ನೇತೃತ್ವದಲ್ಲಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ಶ್ರೀಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬಳಿಕ ಪ್ರತಿಭಟನೆ ಮೆರವಣಿಗೆ ನಡೆಯಿತು.



ಬಾರಿ ಸುದ್ದಿ ಮಾಡಿದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಶ್ರೀಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ , ಬಳಿಕ ಅಲ್ಲಿಂದ ವಿಟ್ಲ ಜಂಕ್ಷನ್ ನಿಂದ ಖಾಸಗಿ ಬಸ್ಸು ನಿಲ್ದಾಣದ ವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದರು.
ಪ್ರತಿಭಟನೆಯ ಬಳಿಕ ನಾಡ ಕಛೇರಿಯಲ್ಲಿ ಉಪ ತಹಸಿಲ್ದಾರರ ಮೂಲಕ ರಾಜ್ಯ ಪಾಲರು ಮತ್ತು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು