ಬೆಳ್ತಂಗಡಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸಂಘರ್ಷ : ಬಿಜೆಪಿ ಕಾರ್ಯಕರ್ತರ ವಾಹನಕ್ಕೆ ಕಲ್ಲು ತೂರಾಟ.

ಬೆಳ್ತಂಗಡಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸಂಘರ್ಷ : ಬಿಜೆಪಿ ಕಾರ್ಯಕರ್ತರ ವಾಹನಕ್ಕೆ ಕಲ್ಲು ತೂರಾಟ.

ಬೆಳ್ತಂಗಡಿ: ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜು ಹುಡಿ ಮಾಡಿದ ಘಟನೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ನಡೆದಿದೆ.
ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು.‌ ಈ ವೇಳೆ ಉಭಯ ತಂಡದಲ್ಲಿಯೂ ಸಾವಿರಾರು ಕಾರ್ಯಕರ್ತರು ಇದ್ದು, ಜೈ ಬಿಜೆಪಿ, ಜೈ ಕಾಂಗ್ರೆಸ್ ಘೋಷಣೆ ಮೊಳಗಿದ್ದು, ಪರಸ್ಪರ ಮಾತಿನ‌ ಚಕಮಕಿ ನಡೆದಿದೆ. ಉದ್ರಿಕ್ತ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ‌ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದು ಪರಿಸ್ಥಿತಿಯನ್ನು ಹತೋಟಿಗೆ ತಂದಿದೆ.

ರಾಜ್ಯ