ರಾಜ್ಯ

ಕಾರುಗಳ ನಡೆವೆ ಭೀಕರ ಅಪಘಾತ- ನಾಲ್ವರಿಗೆ ಗಂಭೀರ ಗಾಯ

ಬೆಳ್ತಂಗಡಿ: ಕಾರುಗಳೆರಡರ ನಡುವೆ ನಡೆದ ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಿನ್ನೆ (ಫೆ.2) ಸಂಜೆ ಬೆಳ್ತಂಗಡಿ ತಾಲೂಕಿನ ಪಿಲ್ಯ ಸಮೀಪ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತಿದ್ದ ಕಾರಿಗೆ ಹಾಗೂ ಉಡುಪಿ ಕಡೆಯಿಂದ ಬರುತಿದ್ದ ಕಾರಿನ ನಡುವೆ ಪಿಲ್ಯ ಸಮೀಪದ ಗೋಳಿ ಕಟ್ಟೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಇಕೋ ಕಾರಿನಲ್ಲಿದ್ದ ಮಗು ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ.

Leave a Response

error: Content is protected !!