ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ ಎನ್ಎಸ್ಎಸ್ ಸೇವಾ ಸಂಗಮದಿಂದ ಸನ್ಮಾನ

ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ ಪಡೆದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್. ಎಸ್. ಸೇವಾ ಸಂಗಮದ ವತಿಯಿಂದ ಸನ್ಮಾನಿಸಲಾಯಿತು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾವು ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಸನ್ಮಾನ ನೆರವೇರಿಸಿ ಡಾ ಅನುರಾಧಾ ಕುರುಂಜಿಯವರ ಸಾಧನೆಯನ್ನು ಶ್ಲಾಘಿಸುವುದರ ಜೊತೆಗೆ ಸೇವಾ ಸಂಗಮದ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಕೆವಿಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕೆವಿಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಎನ್. ಆರ್. ಗಣೇಶ್, ನಿವೃತ್ತ ಕಛೇರಿ ಅಧೀಕ್ಷಕ ರಾಮಚಂದ್ರಗೌಡ ಪಲ್ಲತಡ್ಕ, ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಹೀಮಾನ್, ಶಾಲೆಯ ಎಸ್ .ಡಿ. ಎಂ ಸಿ ಯ ಅಧ್ಯಕ್ಷ ಯತಿನ್ ಪೂಜಾರಿ ಶಾಲಾ ಮುಖ್ಯೋಪಾಧ್ಯಾಯಿನಿ ಸವಿತಾ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ , ಎನ್ ಎನ್ಎಸ್ ಸೇವಾ ಸಂಗಮದ ಅಧ್ಯಕ್ಷ ರಕ್ಷಿತ್ ಬೊಳ್ಳೂರು, ಪ್ರಧಾನ ಕಾರ್ಯದರ್ಶಿ ವಿಶ್ವ ಕಿರಣ, ಸಂಘಟನಾ ಕಾರ್ಯದರ್ಶಿ ಸುಜಿತ್ ಎಂ ಎಸ್ ಊರವರು, ಎನ್ ಎಸ್ ಎಸ್ ಹಾಗೂ ಸೇವಾ ಸಂಗಮದ ಸದಸ್ಯರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಡಾ. ಅನುರಾಧಾ ಕುರುಂಜಿಯವರು ಕಳೆದ ಎಂಟು ವರ್ಷಗಳಿಂದ ಸೇವಾ ಸಂಗಮದ ಸಲಹಾ ಸಮಿತಿ ಸದಸ್ಯರಾಗಿದ್ದು ಸೇವಾ ಸಂಗಮದವರು ಆಯೋಜನೆ ಮಾಡುವ ಕಾರ್ಯಕ್ರಮಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ.

Leave a Response

error: Content is protected !!