
ಪುತ್ತೂರು: ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ ಒಂದು ತಿಂಗಳ ಒಳಗಾಗಿ ಸರಕಾರಿ ಮೆಡಿಕಲ್ ಕಾಲೇಜಿಗೆ ಶಿಲಾನ್ಯಾಸ ನೆರವೇರಿಸಬೇಕೆಂದು ಕನ್ನಡ ಸೇನೆ ಸರಕಾರವನ್ನು ಒತ್ತಾಯಿಸಿದೆ.



ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕನ್ನಡಸೇನೆಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಮಾತನಾಡಿ ವಿದ್ಯಾಕಾಶಿ ಎಂದೇ ಗುರುತಿಸಲ್ಪಟ್ಟಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದೇ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದೇ ಇರುವುದು ಜಿಲ್ಲೆಗೆ ಕಪ್ಪು ಚುಕ್ಕೆಯಾಗಿದೆ. ಪುತ್ತೂರಿನ ಬನ್ನೂರು ಗ್ರಾಮದ ಸರ್ವೆ ನಂಬ್ರ 84 ರಲ್ಲಿ 40 ಎಕ್ರೆ ಜಾಗವನ್ನು ಸರಕಾರವೇ ಗುರುತಿಸಿದ್ದು, 2015 ರಲ್ಲೇ ಇದನ್ನು ಕಾದಿರಿಸಲಾಗಿದೆ. ಜಾಗ ಕಾದಿರಿಸಿ ಸುಮಾರು 7 ವರ್ಷಗಳೇ ಕಳೆದಿದ್ದು, ಮುಂದಿನ ಒಂದು ತಿಂಗಳ ಒಳಗೆ ಈ ಜಾಗದಲ್ಲಿ ಮಡಿಕಲ್ ಕಾಲೇಜಿಗೆ ಶಿಲಾನ್ಯಾಸವನ್ನು ನೆರವೇರಿಸುವ ಕೆಲಸವನ್ನು ಸರಕಾರ ಮಾಡಬೇಕೆಂದು ಆಗ್ರಹ ವ್ಯಕ್ತಪಡಿಸಿದರು ಇಲ್ಲದೇ ಹೋದಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭವಾಗುವವರೆಗೂ ನಿರಂತರ ಹೋರಾಟವನ್ನು ರೂಪಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು..
