ರಾಜ್ಯ

ಹಿಂದೂ ಕಾರ್ಯಕರ್ತರ ಮೇಲೆ ಪೋಲಿಸ್ ದೌರ್ಜನ್ಯ : ಎಸೈ ಮತ್ತು ಪಿಸಿ ಸಸ್ಪೆಂಡ್.

ಪುತ್ತೂರು, ಮೇ 18: ಬಿಜೆಪಿ ಮುಖಂಡರ ಅವಹೇಳನಕಾರಿ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ದೌರ್ಜನ್ಯ ನಡೆಸಿದ ಪೋಲೀಸ್ ಅಧಿಕಾರಿಗಳ ವಿರುದ್ಧ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಕ್ರಮ ಕೈಕೊಂಡಿದ್ದಾರೆ.

ಸರಕಾರಿ ಬಸ್ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ.ಸದಾನಂದ ಗೌಡ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಘಟನೆಗೆ ಸಂಬಂಧಿಸಿದಂತೆ ಪೋಲೀಸರು 9 ಜನರನ್ನು ವಶಕ್ಕೆ ಪಡೆದ ತನಿಖೆ ನಡೆಸಿದ್ದರು.

ತನಿಖೆ ಸಂದರ್ಭದಲ್ಲಿ ಪೋಲೀಸರು ಆರೋಪಿಗಳ ವಿರುದ್ಧ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ‌ ದೌರ್ಜನ್ಯದ ಫೋಟೋಗಳನ್ನು ವೈರಲ್ ಮಾಡಲಾಗಿತ್ತು. ಈ‌ ಸಂಬಂಧ ಪೋಲೀಸ್ ವರಿಷ್ಠಾಧಿಕಾರಿ ಜಿಲ್ಲಾ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ನೇತೃತ್ವ್ ತಂಡ ರಚಿಸಿ ತನಿಖೆ ನಡೆಸಿದ್ದರು.

ತನಿಖೆಯಲ್ಲಿ ಪುತ್ತೂರು ಡಿವೈಎಸ್ಪಿ ವೀರಯ್ಯ ಹೀರೇಮಠ ವಿರುದ್ಧ ಇಲಾಖಾ ಕ್ರಮಕ್ಕೆ ಮೇಲಾದಿಕಾರಿಗಳಿಗೆ ವರದಿ ಸಲ್ಲಿಸಲಾಗಿದ್ದು, ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆ ಎಸೈ ಶ್ರೀನಾಥ್ ರೆಡ್ಡಿ ಮತ್ತು ಪುತ್ತೂರು ನಗರ ಪೋಲೀಸ್ ಠಾಣೆ ಸಿಬ್ಬಂಧಿ ಹರ್ಷಿತ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ನೀಡಿದ್ದಾರೆ

Leave a Response

error: Content is protected !!