ರಾಜ್ಯ

ನಾಳೆಯಿಂದ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ : ದಕ್ಷಿಣಕನ್ನಡ ಜಿಲ್ಲೆಯಾಧ್ಯಂತ ಪ್ರಾಥಮಿಕ ಶಾಲೆ , ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ.

ಮಂಗಳೂರು ಜುಲೈ 4: ಕರಾವಳಿಯಲ್ಲಿ ಮುಂಗಾರ ಮಳೆ ಅಬ್ಬರ ಹೆಚ್ಚಾಗಿದ್ದು, ನಾಳೆಯ ತನಕ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆ ನಾಳೆ ಜುಲೈ ೫ರ ಬುಧವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಮುಂಗಾರು ಮಳೆಯ ಅಬ್ಬರ ಜಿಲ್ಲೆಯಾಧ್ಯಂತ ಜೋರಾಗಿಯೇ ಇದ್ದು, ಜಿಲ್ಲೆಯಲ್ಲಿ ನಾಳೆಯ ತನಕ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳವಾರ ದಿನವಿಡೀ ಮಳೆ ಸುರಿದಿದೆ. ಬುಧವಾರವೂ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಲಾಗಿದೆ. ಪ್ರಮುಖವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪಿಯು ಕಾಲೇಜುಗಳ ತನಕವೂ ರಜೆ ಘೋಷಣೆ ಮಾಡಲಾಗಿದೆ. ಸರಕಾರಿ, ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

Leave a Response

error: Content is protected !!